ಕುಂದಾಪುರ, ಡಿ.20 (DaijiworldNews/PY): ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ನಡೆಸಿ, ಹಣಕ್ಕಾಗಿ ಬೆದರಿಕೆ ಹಾಕುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಎಸ್ ಹೆಂಗವಳ್ಳಿ (26) ಎಂದು ಗುರುತಿಸಲಾಗಿದೆ.
ವ್ಯಕ್ತಿಯೊಬ್ಬರು ಶಂಕರನಾರಾಯಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ರಂಜಿತ್ ಹಣಕ್ಕಾಗಿ ಹನಿಟ್ರ್ಯಾಪ್ ನಡೆಸಿ ಬೆದರಿಕೆ ಹಾಕುತ್ತಿದ್ದನು ಎಂದಿದ್ದಾರೆ. ದೂರಿನಂತೆ ಪೊಲೀಸರು ತನಿಖೆ ನಡೆಸಿದ್ದು, ಡಿ.17ರಂದು ಸಂಜೆ ವೇಳೆ ಆರೋಪಿಯನ್ನು ಬಂಧಿಸಿದ್ದಾರೆ.
ಡಿ.18ರಂದು ಆರೋಪಿಯನ್ನು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಹೆಚ್ಚಿನ ತನಿಖೆಗೆ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.