ಸುಳ್ಯ, ಡಿ 22 (DaijiworldNews/MS): ಅಂಗಡಿಯೊಳಗೆ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಡ್ತಲೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಮರ್ಕಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಕಾಯರ ನಿವಾಸಿ ಭೋಜಪ್ಪ(48) ಎಂದು ಗುರುತಿಸಲಾಗಿದೆ.
ಭೋಜಪ್ಪರವರು ಅಡ್ತಲೆ ಎಂಬಲ್ಲಿ ಅಂಗಡಿ ನಡೆಸುತ್ತಿದ್ದು ತನ್ನ ಅಂಗಡಿಯಲ್ಲೇ ನೇಣು ಬಿಗಿದುಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಲ್ಲ. ಮೃತರು ಪತ್ನಿ ಭವಾನಿ, ಪುತ್ರಿ ರಕ್ಷಾ, ಪುತ್ರ ಯತಿನ್ ರನ್ನು ಅಗಲಿದ್ದಾರೆ. ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821