ಧಾರವಾಡ, ನ 30(SM): ಮುಂದಿನ 2019ರ ಲೋಕಸಭೆಯಲ್ಲಿ 28 ಕ್ಷೇತ್ರಗಳಲ್ಲಿ ಗೆಲ್ಲಬೇಕು ಎಂಬ ಉದ್ದೇಶದಿಂದ ಬಿಜೆಪಿ ಉಸ್ತುವಾರಿಗಳನ್ನು ನೇಮಿಸಿದೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ 28 ಕ್ಷೇತ್ರಗಳಲ್ಲಿಯೂ ಜಯ ಸಾಧಿಸಬೇಕೆಂಬ ಉದ್ದೇಶ ಹೊಂದಿದೆ. ಈ ಹಿನ್ನೆಲೆ ಉಸ್ತುವಾರಿಗಳನ್ನು ನೇಮಿಸಲಾಗಿದೆ.
ಇದರಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕೆಂದು ಅಭಿಪ್ರಾಯಗಳು ಬಂದಿವೆ. ಅಲ್ಲದೇ ಯಾರನ್ನು ಯಾವ ಕ್ಷೇತ್ರಕ್ಕೆ ಉಸ್ತುವಾರಿ ಕೊಟ್ಟರೆ ಲಾಭ ಆಗುತ್ತದೆ ಅನ್ನುವ ಲೆಕ್ಕಾಚಾರ ನಡೆದಿದೆ ಎಂದು ತಿಳಿಸಿದ್ದಾರೆ.
ರಾಜ್ಯದ 106 ತಾಲೂಕುಗಳಲ್ಲಿ ಭೀಕರ ಬರಗಾಲವಿದೆ. ರಾಜ್ಯ ಸರ್ಕಾರ ಈ ಬಗ್ಗೆ ಮಾತನಾಡುತ್ತಿಲ್ಲ. ನೀರಿನ ಸಮಸ್ಯೆ ಬಗ್ಗೆ ಯಾವುದೇ ಜಿಲ್ಲಾ ಉಸ್ತುವಾರಿ ಸಚಿವರು ಸಭೆ ನಡೆಸುತ್ತಿಲ್ಲವೆಂದು ಕಿಡಿಕಾರಿದರು. ಇದೇ ವಿಚಾರವಾಗಿ ಬಿಜೆಪಿ ಒಟ್ಟು 5 ತಂಡವಾಗಿ ರಾಜ್ಯ ಪ್ರವಾಸ ಮಾಡಿ ಬರ ಪರಿಸ್ಥಿತಿಯನ್ನು ಸರ್ಕಾರದ ಗಮನಕ್ಕೆ ತರುತ್ತದೆ ಎಂದು ಅವರು ತಿಳಿಸಿದ್ದಾರೆ.