ಕಾಸರಗೋಡು, ಡಿ 24 (DaijiworldNews/MS): ರಾಜ್ಯ ಪೊಲೀಸ್ ಮಹಾನಿರ್ದೇಶಕ ಅನಿಲ್ ಕಾಂತ್ ಅವರು ರಾಜ್ಯದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ , ಸುಳ್ಳು ಮತ್ತು ಊಹಾಪೋಹಗಳನ್ನು ಹರಡುತ್ತಿರುವ ಸಾಮಾಜಿಕ ಜಾಲತಾಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ರಾಜಕೀಯ ಕೊಲೆ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾ ಇರಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಸುಳ್ಳು ಮಾಹಿತಿ ಹರಡುವ ಮತ್ತು ಹಂಚಿಕೊಳ್ಳುವವರ ಮೇಲೆ ತೀವ್ರ ನಿಗಾ ಇಡಬೇಕು ಎಂದು ಅವರು ನಿರ್ದೇಶಿಸಿದ್ದಾರೆ.ಇದರೊಂದಿಗೆ ಇಂತಹ ಜಾಲತಾಣಗಳ ಗಳ ಅಡ್ಮಿನ್ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.
ಬಿಜೆಪಿ ಮತ್ತು ಎಸ್ಡಿಪಿಐ ಮುಖಂಡರ ಹತ್ಯೆಯ ನಂತರ ಕೋಮು ದ್ವೇಷ ಹರಡುವ ಸಂದೇಶಗಳು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವುದನ್ನು ಗಮನಿಸಿದ ನಂತರ ಉನ್ನತ ಪೊಲೀಸ್ ಅಧಿಕಾರಿಗಳು ಸೂಚನೆಗಳನ್ನು ನೀಡಲಾಗಿದೆ.