ಮಂಗಳೂರು, ಡಿ01(AB): ಸ್ವಾಮಿ ಅಯ್ಯಪ್ಪನ ದೇಗುಲ ಶಬರಿಮಲೆ ವಿಚಾರದಲ್ಲಿ ರಾಜಕೀಯ ಮಾಡಲಾಗುತ್ತಿದೆ ಎಂದು ನಟ ಪ್ರಕಾಶ್ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ನಂತೂರಿನಲ್ಲಿ ನಡೆದ ಜನನುಡಿ ಸಮಾವೇಶದಲ್ಲಿ ಮಾತನಾಡಿದ ಅವರು, ಧರ್ಮ, ಆಚಾರ, ವಿಚಾರಗಳು ವೈಯಕ್ತಿಕವಾದುದು. ಆದರೆ ಶಬರಿಮಲೆ ವಿಚಾರದಲ್ಲಿ ರಾಜಕೀಯ ಮಾಡಲಾಗುತ್ತಿದೆ. ಸುಳ್ಳು ಹೇಳಿ ರಾಜ್ಯಭಾರ ಮಾಡಲಾಗುತ್ತಿದೆ. ಮಾತ್ರವಲ್ಲ ಶಬರಿಮಲೆ ವಿಚಾರದಲ್ಲಿ ರಾಜಕಾರಣಿಗಳು ರಾಜಕೀಯ ಲಾಭ ಪಡೆಯುತ್ತಿದ್ದಾರೆ ಎಂದು ಕಿಡಿ ಕಾರಿದರು. ಮನುಷ್ಯ ಪ್ರಕೃತಿಯನ್ನು ಕಾಪಾಡುವಷ್ಟು ದೊಡ್ಡವನಲ್ಲ. ಶಬರಿಮಲೆ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವುದು ಸರಿಯಲ್ಲ. ಜನರ ಭಾವನೆಗಳಿಗೆ ಬೆಲೆ ಕೊಡಬೇಕು. ಜನರ ವೈಯಕ್ತಿಕ ವಿಷಯದಲ್ಲಿ ರಾಜಕೀಯ ಪ್ರವೇಶ ಮಾಡಬಾರದು ಎಂದು ಹೇಳಿದ್ದಾರೆ.