ಮಂಗಳೂರು, ಡಿ 01(SM):ದ.ಕ.ಜಿಲ್ಲೆಯಲ್ಲಿ ಕಳೆದ ಐದಾರು ವರ್ಷಗಳಿಂದ ಗಾಂಜಾ ಮಾಫಿಯಾಗಳು ಸರಕಾರವನ್ನೇ ಕಪಿಮುಷ್ಠಿಯಲ್ಲಿಟ್ಟುಕೊಂಡಿದೆ. ಇದರಿಂದ ಸಾಮೂಹಿಕ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಇಡೀ ಜಿಲ್ಲೆಯ ಜನ ತಲೆ ತಗ್ಗಿಸುವ ಕೆಲಸ ಮಂಗಳೂರಿನಲ್ಲಿ ನಡೆದಿದೆ. ಈ ಘಟನೆ ಸರಕಾರದ ವೈಫಲ್ಯವನ್ನು ಎತ್ತಿತೋರಿಸುತ್ತದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.
ಸಂತ್ರಸ್ತೆ ಯುವತಿಯ ಮನೆಗೆ ಭೇಟಿ ನೀಡಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡುರುವ ಅವರು, ಶೀಘ್ರವಾಗಿ ಆರೋಪಿಗಳನ್ನು ಬಂಧಿಸಿದ ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ.ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಇನ್ನು ಇದೇ ಸಂದರ್ಭ ಅತಿವೃಷ್ಟಿಯಿಂದ ನಷ್ಟ ಅನುಭವಿಸಿದ ದ.ಕ.ಹಾಗೂ ಕೊಡಗು ಜಿಲ್ಲೆಗಳಿಗೆ ಕೇಂದ್ರ ಸರಕಾರ 720 ಕೋಟಿ ರೂಪಾಯಿ ಮಂಜೂರು ಮಾಡಿದೆ. 541.28 ಕೋಟಿ ಪ್ಯಾಕೇಜ್ ಬಿಡುಗೊಳಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.