ಮಂಗಳೂರು, ಡಿ.28 (DaijiworldNews/SM): ಹೊಸ ವರ್ಷಾಚರಣೆಗೆ ನಿರ್ಬಂಧ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳ್ಳಲಿದ್ದು, ಕರಾವಳಿಯಲ್ಲಿ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದೆಂದು ದ.ಕ. ಜಿಲ್ಲಾ ಎಸ್ಪಿ ಋಶಿಕೇಶ್ ಸೋನವಾಣೆ ತಿಳಿಸಿದ್ದಾರೆ.
ಮಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ರಾತ್ರಿ 10ರಿಂದ ಬೆಳಗ್ಗೆ 5ರ ತನಕ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಸರಕಾರ ಹೊರಡಿಸಿರುವ ಮಾರ್ಗಸೂಚಿ ಕಟ್ಟುನಿಟ್ಟಾಗಿ ಜಾರಿಗೆ ಬರಲಿದೆ. ಅಲ್ಲದೆ, ಕೇರಳ-ಕರ್ನಾಟಕ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುವುದು ಎಂದ ಅವರು, ಹೆಚ್ಚಿನ ಚೆಕ್ ಪೋಸ್ಟ್ ಗಳನ್ನು ತೆರೆದು ನಿಯಂತ್ರಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಇನ್ನು ನೈಟ್ ಕರ್ಫ್ಯೂ ಸಂದರ್ಭದಲ್ಲಿ ನಿಷೇಧಿತ ಚಟುವಟಿಕೆಗೆ ಅವಕಾಶವಿಲ್ಲ. ಜನವರಿ ೨ರ ತನಕ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಸಾರ್ವಜನಿಕರು ಪೊಲೀಸ್ ಇಲಾಖೆಯಿಂದಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.