ಉಳ್ಳಾಲ, ಡಿ. 28 (DaijiworldNews/SM): ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ದೇರಳಕಟ್ಟೆ ಬದ್ಯಾರು ನಿವಾಸಿ ಇಸ್ಮಾಯಿಲ್ ಇಬ್ರಾಹಿಂ(55) ಎಂಬವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಡಿ. 26 ರಂದು ಇಬ್ರಾಹಿಂ ಅವರು ದೇರಳಕಟ್ಟೆಯಿಂದ ಕೆ.ಸಿ. ರೋಡ್ ಕಡೆಗೆ ಬೈಕಿನಲ್ಲಿ ತೆರಳುವ ಸಂದರ್ಭ ಬೈಕ್ ಸ್ಕಿಡ್ ಆಗಿ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆ ಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದರು.
ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಇಬ್ರಾಹಿಂ ಮಂಗಳೂರಿನಲ್ಲಿ ಗುಜರಿ ಉದ್ಯಮವನ್ನು ಹಲವು ವರ್ಷಗಳಿಂದ ನಡೆಸುತ್ತ ಬಂದಿದ್ದರು. ನಾಗುರಿ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.