ಮಂಗಳೂರು, ಡಿ 29 (DaijiworldNews/MS): ನಗರದ ಹ್ಯಾಟೀಲ್ ಬಳಿ ನ್ಯಾಯಾಧೀಶರ ವಸತಿಗೃಹಗಳ ನಿರ್ಮಾಣಕ್ಕೆ (ಬ್ಲಾಕ್-ಬಿ) ಸುಪ್ರೀಂ ಕೋಟ್೯ನ ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಝೀರ್ ಅವರು ಡಿಸೆಂಬರ್ 29ರ ಬುಧವಾರ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಹೈಕೋರ್ಟ್ ನ ನ್ಯಾಯಾಧೀಶರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ್, ಹೈಕೋರ್ಟ್ ನ ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್, ಹೈಕೋರ್ಟ್ನ ರಿಜಿಸ್ಟರ್ ಜನರಲ್ ಶಿವಶಂಕರೆ ಗೌಡ, ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಮುರಳೀಧರ್ ಪೈ. ಬಿ. ಅವರು ಸುಪ್ರೀಂಕೋರ್ಟ್ ನ್ಯಾಯಾಧೀಶರೊಂದಿಗೆ ಶಿಲನ್ಯಾಸ ಕಾರ್ಯಕ್ರಮಕ್ಕೆ ಜತೆಯಾದರು.
ಈ ಸಂದರ್ಭದಲ್ಲಿ ನ್ಯಾಯಾಧೀಶರು, ನ್ಯಾಯಾಂಗ ಇಲಾಖೆಯ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಅಭಿಯಂತರ ಗಣೇಶ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೆ.ಟಿ. ಚಂದ್ರಶೇಖರ್, ಸೆಕ್ಷನ್ ಆಫೀಸರ್ ಶ್ರೀಧರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.