ಕುಂದಾಪುರ, ಡಿ 30 (DaijiworldNews/MS): ಇಲ್ಲಿನ ಶಿರಿಯಾರ ಹೆಸ್ಕುತ್ತೂರಿನಲ್ಲಿ ಪ್ರೇಮ ವೈಫಲ್ಯದಿಂದ ಮನನೊಂದು ಯುವಕನೊಬ್ಬ ಯುವತಿಗೆ ಚೂರಿಯಿಂದ ಇರಿದು ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.29ರ ಬುಧವಾರ ಸಂಜೆ ವೇಳೆ ನಡೆದಿದೆ.
ರಿಕ್ಷಾ ಚಾಲಕ ರಾಘವೇಂದ್ರ ಕುಲಾಲ್ (35) ಎಂಬಾತ ಯುವತಿಗೆ ಚೂರಿಯಿಂದ ಇರಿದು ಬಳಿಕ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಸ್ಥಳೀಯ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದು, ಆ ಪ್ರೇಮ ವೈಫಲ್ಯಗೊಂಡಿದ್ದರಿಂದ ಮನನೊಂದಿದ್ದನು.
ಬುಧವಾರ ಸಂಜೆ ಶಿರಿಯಾರ ಯುವತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಬಳಿಕ ಹಾರ್ಯಾಡಿ ಬಳಿಯ ಮನೆಗೆ ತೆರಳಿ ತಾನೂ ನೇಣಿಗೆ ಶರಣಾಗಿದ್ದಾನೆ.
ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821