ಮೂಡಬಿದ್ರಿ, ಡಿ 30 (DaijiworldNews/MS): ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಮೂಡಬಿದ್ರಿ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಮೂಡಬಿದ್ರಿಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಭವನದಲ್ಲಿ ಡಿ.30ರ ಗುರುವಾರ ಆಳ್ವಾಸ್ ನುಡಿಸಿರಿ ಸಭಾಂಗಣದಲ್ಲಿ ಕಾನೂನು ಸೇವಾ ಶಿಬಿರವನ್ನು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್ ಅವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಹೈಕೋರ್ಟ್ನ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ನ್ಯಾ. ಬಿ. ವೀರಪ್ಪ, ರಾಜ್ಯ ಹೈಕೋರ್ಟ್ನ ನ್ಯಾಯಮೂರ್ತಿಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ನ್ಯಾ. ಕೆ. ಸೋಮಶೇಖರ್ ಅವರು ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮುರಲಿಧರ ಪೈ. ಬಿ., ಬೆಂಗಳೂರಿನ ರಾಜ್ಯ ಹೈಕೋರ್ಟ್ ನ ರಿಜಿಸ್ಟ್ರಾರ್ ಜನರಲ್ ಟಿ.ಜಿ. ಶಿವಶಂಕರೇಗೌಡ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಬೆಂಗಳೂರಿನ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಚ್. ಶಶಿಧರ ಶೆಟ್ಟಿ, ಮೂಡಬಿದ್ರಿ ವಕೀಲರ ಸಂಘದ ಅಧ್ಯಕ್ಷ ಎಂ. ಸುಬ್ರಹ್ಮಣ್ಯ ತಂತ್ರಿ, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಝೀರ್ ಅವರನ್ನು ಆಳ್ವಾಸ್ ಸಂಸ್ಥೆಗಳ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಅಕ್ಷರ ಸಂತ ಹರೇಕಳ ಹಾಜಬ್ಬ, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.