ಕಾರ್ಕಳ: "ವಿದ್ಯಾರ್ಥಿಗಳು ಯಾವುದೇ ಅಂಜಿಕೆ ಅಳುಕಿಲ್ಲದೆ ಲಸಿಕೆ ತೆಗೆದುಕೊಳ್ಳಬೇಕು. ಲಸಿಕೆಯು ನಮ್ಮ ಆರೋಗ್ಯದ ಹಿತದೃಷ್ಟಿಯಿಂದ ಇವೆಯೇ ಹೊರತು ಯಾವುದೇ ಅಪಾಯ ಸೃಷ್ಟಿಸುವುದಕ್ಕಲ್ಲ. ಲಸಿಕೆಯ ಕುರಿತು ಇರುವ ಮಿಥ್ಯಾರೋಪಗಳಿಗೆ ತಲೆ ಕೆಡೆಸಿಕೊಳ್ಳಬಾರದು" ಎಂದು ಕಾರ್ಕಳ ತಾಲೂಕು ವೈದ್ಯಾಧಿಕಾರಿ ಡಾ.ಕೃಷ್ಣಾನಂದ ಶೆಟ್ಟಿ ಹೇಳಿದರು.
ಇಲ್ಲಿನ ಕ್ರೈಸ್ಟ್ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ15 ರಿಂದ 18 ವರ್ಷದವರೆಗಿನ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ಅಭಿಯಾನ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಮಾತನಾಡಿದರು.
ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಕೆ.ಎಸ್.ರಾವ್, ತಾಲೂಕು ಸರಕಾರಿ ಆಸ್ಪತ್ರೆಯ ಸರ್ಜನ್ ಡಾ.ಉದಯಕುಮಾರ್, ವೈದ್ಯೆ ಡಾ. ಮಾನಸ ಶ್ರೀರಾಮ್, ಡಾ. ಸ್ಮಿತಾ ವಾಝ್, ಕ್ರೈಸ್ಟ್ಕಿಂಗ್ ಪದವಿಪೂರ್ವ ವಿಭಾಗದ ಉಪಪ್ರಾಚಾರ್ಯ ಡಾ.ಪ್ರಕಾಶ್ ಭಟ್, ಪ್ರೌಢಶಾಲಾ ಪ್ರಾಚಾರ್ಯ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ವಿಭಾಗದ ಪ್ರಾಚಾರ್ಯ ಮೇರಿಯನ್ ಡಿ’ಸೋಜ ಮುಂತಾದವರು ಉಪಸ್ಥಿತರಿದ್ದರು.
ಪದವಿಪೂರ್ವ ಪ್ರಾಚಾರ್ಯ ಲಕ್ಷ್ಮೀನಾರಾಯಣ ಕಾಮತ್ ನಿರ್ವಹಿಸಿದರು.