ಮಂಡ್ಯ, ಡಿ 03 (MSP): ಕಾಂಗ್ರೆಸ್ ನಾಯಕಿ, ಮಾಜಿ ಸಂಸದೆ,ನಟಿ ರಮ್ಯಾ ಅವರು ಮಂಡ್ಯದ ವಿದ್ಯಾನಗರದ ಕೆ.ಆರ್.ರಸ್ತೆಯಲ್ಲಿರುವ ಬಾಡಿಗೆ ಮನೆಯನ್ನು ಖಾಲಿ ಮಾಡಿದ್ದಾರೆ.
ಭಾನುವಾರ ತಡರಾತ್ರಿ ನಿವಾಸದ ಬಳಿ ಬಂದ ಎರಡು ಲಾರಿಗಳು, ಅವರ ಮನೆಯಲ್ಲಿದ್ದ ವಸ್ತುಗಳನ್ನು ಸಾಗಾಟ ಮಾಡಿದ್ದಾರೆ ಎನ್ನಲಾಗುತ್ತಿದೆ .ಅಲ್ಲದೆ ಈ ದೃಶ್ಯಗಳನ್ನು ಕ್ಯಾಮರಾಗಳಲ್ಲಿ ಸೆರೆಯಾಗಿದೆ.
ಮಂಡ್ಯದ ಜನತೆಯ ಕಷ್ಟಗಳಿಗೆ ಸ್ಪಂದಿಸುತ್ತೇನೆ ಎಂದು ಹೇಳಿದ ನಟಿ ಇದೀಗಾ ಏಕಾಏಕಿ ಮನೆ ಖಾಲಿ ಮಾಡಿರುವುದು ಸ್ಥಳೀಯರು ಆಕ್ರೋಶಕ್ಕೆ ಕಾರಣವಾಗಿದೆ.
ಅಂಬರೀಶ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳದೆ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ರಮ್ಯಾ ಅವರ ಈ ಮನೆಗೆ ಪೊಲೀಸ್ ಭದ್ರತೆ ಒದಗಿಸಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿತ್ತು.