ವಿಟ್ಲ, ಜ 04 (DaijiworldNews/PY): ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಅಳಿಕೆ ಗ್ರಾಮದ ನೆಕ್ಕಿತಪುಣಿ ಎನ್ನುವಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಬಾಲಕನನ್ನು ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸಾವೆರ್ ಡಿಸೋಜ ಅವರ ಪುತ್ರ ಸಂದೀಪ್ ಅನಿಶಿತ್ ಡಿಸೋಜ (15) ಎಂದು ಗುರುತಿಸಲಾಗಿದೆ.
ಸಂದೀಪ್ 10ನೇ ತರಗತಿಯಲ್ಲಿ ಕಲಿಯುತ್ತಿದ್ದು, ಸರಿಯಾಗಿ ಶಾಲೆಗೆ ಹೋಗುತ್ತಿರಲಿಲ್ಲ ಎನ್ನಲಾಗಿದೆ. ನಿನ್ನೆ ರಾತ್ರಿ ಕೋಣೆಯಲ್ಲಿ ಮಲಗಿದ್ದ ಈತ ಬೆಳಗ್ಗೆ ಮನೆಯವರು ನೋಡಿದಾಗ ಮೃತದೇಹ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ವಿಟ್ಲ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821