ಉಡುಪಿ, ಜ. 4 (DaijiworldNews/SM): ಜಿಲ್ಲೆ ವ್ಯಾಪ್ತಿಯಲ್ಲಿರುವ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ 19 ಕುರಿತು ಜಾಗೃತಿ ಮೂಡಿಸುವ ಚಟುವಟಿಕೆ ಆಯೋಜಿಸುವಂತೆ ಜಿಲ್ಲಾಧಿಕಾರಿ ಕುರ್ಮಾರಾವ್ ಸೂಚಿಸಿದ್ದಾರೆ.
ಅವರು ಇಂದು ಸರ್ವೇಕ್ಷಣಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಬಕಾರಿ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಮೀನುಗಾರಿಕೆ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಸಾರಿಗೆ ಇಲಾಖೆ, ಎಪಿಎಂಸಿ, ಧಾರ್ಮಿಕ ದತ್ತಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ಕೋವಿಡ -19 ಕುರಿತು ಜನ ಜಾಗೃತಿ ಮೂಡಿಸುವ ಚಟುವಟಿಕೆಗಳನ್ನು ಜನವರಿ 5 ರಂದು ಸಂಜೆ 5 ರಿಂದ 6ರವಗೆ ಕಟ್ಟುನಿಟ್ಟಾಗಿ ಆಯೋಜಿಸಲು ಅಗತ್ಯ ಕ್ರಮಕೈಗೊಳ್ಳಲು ಸೂಚಿಸಿದರು.
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಓಡಾಡುವವರು, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಇರುವವರು, ರಸ್ತೆಯಲ್ಲಿ ಹಾಗೂ ಸಿಕ್ಕ ಸಿಕ್ಕಕಡೆ ಉಗುಳುವವರನ್ನು ಗುರುತಿಸಿ ಅವರಿಗೆ ಎಚ್ಚರಿಕೆ ನೀಡುವುದು, ಕೋವಿಡ 19 ಮಾರ್ಗ ಸೂಚನೆ ಉಲ್ಲಂಘಿಸಿರುವ ಸಾರ್ವಜನಿಕ ರನ್ನು ಗುರುತಿಸಿ ಸರ್ಕಾರ ನಿಗಧಿ ಪಡಿಸಿದ ರೀತಿಯಲ್ಲಿ ದಂಡ ವಿಧಿಸಿ ಕೊರೋನಾ ಕುರಿತು ಜನ ಜಾಗೃತ ಮೂಡಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಜಿ. ಪಂ. ಮುಖ್ಯ ಕಾರ್ಯ ನಿರ್ವವಣಾಧಿಕಾರಿ ಡಾ.ನವೀನ್ ಭಟ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಡಿ.ಹೆಚ್.ಓ ಡಾ. ನಾಗಭೂಷಣ ಉಡುಪ, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್ ಪೆಡ್ನೆಕರ್, ಆರೋಗ್ಯ ಇಲಾಖೆ ಮತ್ತು ವಿವಿದ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.