ಉಡುಪಿ, ಜ. 4 (DaijiworldNews/SM): ಕಾಂಗ್ರೆಸ್ ನಾಯಕ ಡಿ.ಕೆ. ಸುರೇಶ್ ವಿರುದ್ಧ ಸಿಡಿದೆದ್ದ ಉಡುಪಿ ಬಿಜೆಪಿ ಮುಖಂಡರು, ಪ್ರತಿಭಟನೆಯ ಭರಾಟೆಯಲ್ಲಿ ಮಾಸ್ಕ್, ಸಾಮಾಜಿಕ ಅಂತರವನ್ನು ಮರೆತೇ ಪ್ರತಿಭಟನೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದ ರಾಮನಗರದ ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯಮಂತ್ರಿ ಎದುರೇ ಶಿಷ್ಟಾಚಾರ ಉಲ್ಲಂಘಿಸಿ, ಕಾಂಗ್ರೆಸ್ ನಾಯಕ ಡಿ ಕೆ ಸುರೇಶ್ ರಾಜ್ಯದ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರ ಮೇಲೆ ಹರಿಹಾಯ್ದ ಘಟನೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಚೇರಿಯ ಎದುರು ಇಂದು ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಭಾಗವಹಿಸಿದ್ದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಪಾಲಿಸದೆ ಪ್ರತಿಭಟನೆ ನಡೆಸಿದ್ದು, ಆಡಳಿತ ಪಕ್ಷದವರೇ ಸರಕಾರದ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಮತ್ತೊಂದೆಡೆ ರಾಜ್ಯ ಸರಕಾರ ರಾಜ್ಯದಲ್ಲಿ ಟಪ್ ರೂಲ್ಸ್ ಜಾರಿಗೊಳಿಸಿ ಜನ ಸಾಮಾನ್ಯರನ್ನು ಸಂಕಷ್ಟಕ್ಕೀಡು ಮಾಡಲು ಮುಂದಾಗಿದ್ದು, ಈ ವೇಳೆ ಇಂತಹ ಬೇಜಬ್ದಾರಿ ವರ್ತನೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.