ಮಂಗಳೂರು, ಜ. 05 (DaijiworldNews/SM): ರಾಜ್ಯದಲ್ಲಿ ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಸರಕಾರ ಕೆಲವು ನಿರ್ಬಂಧಗಳನ್ನು ವಿಧಿಸಿದೆ. ಅದರಂತೆ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಈ ವಾರ ಪೂರ್ವ ನಿಗದಿತ ಮದುವೆ ಸಮಾರಂಭಗಳಿಗೆ ಅವಕಾಶವಿದ್ದು, ಮುಂದಿನವಾರ ಕಟ್ಟುನಿಟ್ಟಾಗಿ ಜಾರಿಗೆ ಬರಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರದ ಆದೇಶದಂತೆ ಜಿಲ್ಲೆಯಲ್ಲೂ ನಿಯಮಗಳನ್ನು ಜಾರಿಗೆ ತರಲಾಗಿದೆ. ಈ ವಾರ ಪೂರ್ವ ನಿಗದಿತ ಮದುವೆ ಸಮಾರಂಭಗಳು ಹಾಗೂ ಇತರ ಅನಿವಾರ್ಯ ಕಾರ್ಯಕ್ರಮಗಳಿಗೆ ಸರಕಾರದ ನಿಯಮದಂತೆ 200 ಜನರನ್ನು ಮೀರದಂತೆ ನಡೆಸಲು ಅವಕಾಶವಿದೆ. ಆದರೆ, ಮುಂದಿನವಾರದಿಂದ ಜನರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ಆದಷ್ಟು ಸಮಾರಂಭಗಳನ್ನು ಮುಂದೂಡುವಂತೆ ಮನವಿ ಮಾಡಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕೇವಲ ಜಿಲ್ಲಾಡಳಿತದ ಮಾತ್ರ ಜವಾಬ್ದಾರಿಯಲ್ಲಿ ಪ್ರತಿಯೊಬ್ಬ ನಾಗರಿಕ ಕೂಡ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.