ಉಡುಪಿ, ಜ. 05 (DaijiworldNews/SM): ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಲಾಗುವುದೆಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ವಾರಂತ್ಯದಲ್ಲಿ ಏನಿರುತ್ತೆ? ಏನಿರಲ್ಲ?
ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ
ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿ
ಎಲ್ಲಾ ಕೈಗಾರಿಕೆಗಳು, ಐ.ಟಿ ಸಂಸ್ದೆಗಳ ಕಾರ್ಯಾಚರಣೆಗೆ ಕರ್ಫ್ಯೂವಿನಿಂದ ವಿನಾಯಿತಿ
ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು,
ಡೈರಿ ಮತ್ತು ಹಾಲಿನ ಬೂತ್ ಗಳು ಮತ್ತು ಪ್ರಾಣಿಗಳ ಮೇವನ್ನು ವ್ಯಾಪಾರ ಮಾಡುವ ಅಂಗಡಿಗಳು ಓಪನ್
ಬೀದಿಬದಿ ವ್ಯಾಪಾರಸ್ಥರು ಕಾರ್ಯನಿರ್ವಹಿಸಲು ಅವಕಾಶ
ರೆಸ್ಟೋರೆಂಟ್ ಮತ್ತು ಹೋಟೆಲ್ ಗಳಲ್ಲಿ ಹೋಮ್ ಡೆಲಿವರಿಗೆ ಮಾತ್ರ ಅವಕಾಶ
ಮದುವೆ ಕಾರ್ಯಕ್ರಮಕ್ಕೆ ತೆರೆದ ಪ್ರದೇಶಗಳಲ್ಲಿ 200, ಸಭಾಂಗಣದಲ್ಲಿ 100 ಜನರಿಗೆ ಸೀಮಿತ