ಹೊಸದುರ್ಗ, ಡಿ 06 (DaijiworldNews/MS): ತನ್ನ ನಾಲ್ಕು ವರ್ಷದ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಂದೆಯನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಅಜನೂರು ನಿವಾಸಿಯಾದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆತ ತನ್ನ ನಾಲ್ಕು ವರ್ಷದ ಮಗಳಿಗೆ ಮೂರು ತಿಂಗಳ ಹಿಂದೆ ಲೈಂಗಿಕ ಕಿರುಕುಳ ನೀಡಿದ್ದು, ಅಂದಿನಿಂದ ತಲೆಮರೆಸಿಕೊಂಡಿದ್ದ.
ಈತನ ಪತ್ತೆಗೆ ಹೊಸದುರ್ಗ ಪೊಲೀಸರು ಯುವಕನಿಗಾಗಿ ಲುಕ್ ಔಟ್ ನೋಟಿಸ್ ಪ್ರಕಟಿಸಿದ್ದರು. ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ಈತ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಂಧಿತನನ್ನು ಕಾಞಂಗಾಡ್ ಪೊಲೀಸರಿಗೆ ಒಪ್ಪಿಸಲಾಗಿದೆ.