ಮಂಗಳೂರು, ಜ. 6 (DaijiworldNews/SM): ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ಭೇಟಿ ವೇಳೆ ಭದ್ರತಾ ವೈಫಲ್ಯ ಹಿನ್ನೆಲೆಯಲ್ಲಿ ದ.ಕ.ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಈ ಸಂದರ್ಭದಲ್ಲಿ ಪರಸ್ಪರ ಘರ್ಷಣೆಗೆ ಕಾರಣವಾಗಿದೆ.
ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾದಿಂದ ಪ್ರತಿಭಟನೆ ನಡೆಸಲಾಗಿದ್ದು, ಧಿಕ್ಕಾರ ಕೂಗಿ ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನಕಾರರು ಆಗಮಿಸಿದ್ದರು. ಈ ವೇಳೆ ಪ್ರತಿಭಟನಾಕಾರರ ಎದುರು ಕಾಂಗ್ರೆಸ್ ಧ್ವಜ ಹಾರಿಸಿದ ಕಾಂಗ್ರೆಸ್ ಕಾರ್ಯಕರ್ತ ಆಕ್ರೋಶ ಹೊರಹಾಕಿದ್ದರು.
ಬಿ.ಜೆ.ಪಿ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಕಾರ್ಯಕರ್ತನ ನಡುವೆ ವಾಗ್ವಾದ ನಡೆಯಿತು. ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಈ ವೇಳೆ ಪೊಲೀಸರು ಮಧ್ಯೆ ಪ್ರವೇಶಿಸಿ ಪ್ರತಿಭಟನಾಕಾರರನ್ನು ತಡೆದ ಪ್ರಸಂಗ ಎದುರಾಯಿತು.