ಮಂಗಳೂರು, ಡಿ 07 (DaijiworldNews/MS): ಇಲ್ಲಿನ ಅಶೋಕನಗರದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 19 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ನಿತೇಶ್ ರಿತಿನ್ (19) ಎಂದು ಗುರುತಿಸಲಾಗಿದೆ. ಆರೋಪಿಯು ತನ್ನ ಮನೆಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದಾಗ, ಅಪಾಯವನ್ನು ಗ್ರಹಿಸಿದ ಬಾಲಕಿ ತಪ್ಪಿಸಿಕೊಂಡು ತನ್ನ ಮನೆಗೆ ಓಡಿದ್ದಾಳೆ. ಆರೋಪಿಯೂ ಸಂತ್ರಸ್ತೆಯ ಮನೆಗೆ ನುಗ್ಗಿ ಯಾರಿಗೂ ವಿಚಾರ ತಿಳಿಸಿದಂತೆ ಅಪ್ರಾಪ್ತ ಬಾಲಕಿಗೆ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ವಿವರಿಸಲಾಗಿದೆ.
ಉರ್ವಾ ಪೊಲೀಸ್ ಠಾಣೆಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.