ಮಂಗಳೂರು, ಜ. 07 (DaijiworldNews/SM): ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಹಾಗೂ ಶೈಕ್ಷಣಿಕ ಚಟುವಟಿಕೆಗಳ ಮೇಲಾಗುತ್ತಿರುವ ಪರಿಣಾಮಗಳ ಕುರಿತಂತೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ ಸುದ್ದಿಗೋಷ್ಠಿ ನಡೆಸಿದ್ದಾರೆ.
ಸಮವಸ್ತ್ರ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟ ಕಟ್ಟುಪಾಡು ರೂಪಿಸಲು ಸಮಿತಿ ರಚಿಸಲಾಗುವುದೆಂದು ಅವರು ತಿಳಿಸಿದ್ದಾರೆ. ಸ್ಕಾರ್ಫ್ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಈ ಹೇಳಿಕೆ ನೀಡಿದ್ದಾರೆ. ವಿದ್ಯಾರ್ಥಿಗಳಲ್ಲಿ ಸಮಾನತೆಯ ಮನೋಭಾವ ಮೂಡಿಸುವ ನಿಟ್ಟಿನಲ್ಲಿ ಇದು ಅಗತ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.
ಇನ್ನು ಇತ್ತೀಚಿನ ಬೆಳವಣಿಗೆಗಳು ವಿದ್ಯಾರ್ಥಿಗಳ ಕಲಿಕೆಯ ಮೇಲೆ ನೇರಪರಿಣಾಮ ಬೀರುತ್ತಿದೆ. ಆನ್ ಲೈನ್ ತರಗತಿಗಳು ಅಂದುಕೊಂಡಷ್ಟು ಪರಿಣಾಮಕಾರಿಯಾಗಿಲ್ಲ. ವಿದ್ಯಾರ್ಥಿಗಳಿಗೆ ತರಗತಿಗಳಲ್ಲಿನ ಶಿಕ್ಷಣವೇ ಉತ್ತಮವಾಗಿದೆ ಎಂದು ಅವರು ಹೇಳಿದ್ದಾರೆ.