ಮಂಗಳೂರು, ಜ 07 (DaijiworldNews/PY): ನಗರದ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಜ.7ರ ಶುಕ್ರವಾರ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿಯವರ ಮರು ಮುದ್ರಣಗೊಂಡ ಯೋಗ ಆರೋಗ್ಯ ಪುಸ್ತಕ ಬಿಡುಗಡೆ ಮಾಡಿದರು.
ಬದುಕಿನ ಪರಿಪೂರ್ಣತೆಗೆ ಯೋಗ ಅಗತ್ಯ, ಉತ್ತಮ ಆರೋಗ್ಯಕ್ಕಾಗಿ ನಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವಂತೆ ಅವರು ಸಲಹೆ ನೀಡಿದರು.
ಆನ್ಲೈನ್ ಮೂಲಕ ಯೋಗ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರು ಸದುಪಯೋಗ ಪಡೆಯುವಂತೆ ಅವರು ಕೋರಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಕೌಶಲ್ಯಾಭಿವೃದ್ದಿ ಅಧಿಕಾರಿ ಹೇಮಚಂದ್ರ, ಆಡಿಟರ್ ಡಾ. ಜಗನ್ನಾಥ್ ಹಾಗೂ ಇತರರು ಉಪಸ್ಥಿತರಿದ್ದರು.