ಉಡುಪಿ, ಜ 08 (DaijiworldNews/PY): ಇಂದಿನಿಂದ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಹಿನ್ನೆಲೆ, ಜಿಲ್ಲೆಯಲ್ಲಿ ಸರ್ಕಾರಿ ಆದೇಶಕ್ಕೆ ಮಿಶ್ರ ಪ್ರತಿಕ್ರಿಯೆ ದೊರಕಿದೆ.
ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಅಂಗಡಿಗಳು ಎಂದಿನಂತೆ ಕಾರ್ಯಾಚರಿಸಿದ್ದು, ಹೆಚ್ಚಿನ ಅಂಗಡಿ ಮಾಲೀಕರು ಸ್ವಯಂ ಪ್ರೇರಿತವಾಗಿ ವೀಕೆಂಡ್ ಕರ್ಫ್ಯೂಗೆ ಬೆಂಬಲ ನೀಡಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಯಥಾಸ್ಥಿತಿಯಲ್ಲಿ ಬಸ್ ಸಂಚಾರ ಇದ್ದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಬೇಡಿಕೆಗೆ ಅನುಗುಣವಾಗಿ ಬಸ್ ಸಂಚಾರಕ್ಕೆ ಅವಕಾಶ ಮಾಡಲಾಗಿದೆ.
ಜನಸಂಚಾರ ಎಂದಿನಂತೆ ಇದ್ದು, ಖಾಸಗಿ, ಸಿಟಿ ಹಾಗೂ ಕೆಎಸ್ಆರ್ಟಿಸಿ ಬಸ್ ಸಂಚಾರ ಯಥಾಸ್ಥಿತಿ ಇತ್ತು. ಅಲ್ಲದೇ, ರಿಕ್ಷಾ ಸೇವೆಯೂ ಲಭ್ಯವಿದೆ.
ಹೋಟೆಲ್ಗಳಲ್ಲಿ ಪಾರ್ಸೆಲ್ಗೆ ಮಾತ್ರವೇ ಅವಕಾಶ ನೀಡಲಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ಪೋಲಿಸ್ ಮೇಲ್ವಿಚಾರಣೆ ನಡೆಯುತ್ತಿದೆ.