ಬೆಂಗಳೂರು, ಡಿ 05(SM): ಪ್ರಧಾನಿ ನರೇಂದ್ರ ಮೋದಿಯನ್ನು ನಂಬಿಕೊಂಡು ರಾಜ್ಯದ ರೈತರ ಸಾಲಮನ್ನಾ ಮಾಡಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸೌದದಲ್ಲಿ ಸದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೆ ಕೊಟ್ಟಿದ್ದ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದು ಅವರು ಹೇಳಿದರು.
ಡಿಸೆಂಬರ್ 8 ರಿಂದ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರ ಸಾಲಮನ್ನಾ ಕಾರ್ಯ ಪ್ರಾರಂಭವಾಗಲಿದ್ದು, ಮೊದಲ ಹಂತವಾಗಿ ರೈತರ 50,000 ರೂಪಾಯಿ ಸಾಲಮನ್ನಾ ಆಗಲಿದೆ ಎಂದು ಅವರು ಹೇಳಿದರು. ಸಾಲಮನ್ನಾಕ್ಕೆ 6500 ಕೋಟಿ ರೂಪಾಯಿ ಹಣವನ್ನು ಈ ಆರ್ಥಿಕ ವರ್ಷದಲ್ಲಿ ಮೀಸಲಿಡಲಾಗಿದೆ. ಸರ್ಕಾರಕ್ಕೆ ಆರ್ಥಿಕ ಕೊರತೆ ಇಲ್ಲ, 17 ಲಕ್ಷ ರೈತರ ರಾಷ್ಟ್ರೀಯ ಬ್ಯಾಂಕುಗಳಲ್ಲಿನ 50,000 ಸಾಲಮನ್ನಾ ಆಗಲಿದೆ ಎಂದು ಅವರು ಮಾಹಿತಿ ನೀಡಿದರು.
ಮೊದಲ ಹಂತವಾಗಿ ದೊಡ್ಡಬಳ್ಳಾಪುರ ಹಾಗೂ ಸೇಡಂ ತಾಲ್ಲೂಕಿನಲ್ಲಿ ಸಾಲಮನ್ನಾ ಜಾರಿ ಆಗಲಿದೆ. ಆ ನಂತರ ಪೂರ್ಣ ರಾಜ್ಯದ ರೈತರ ಸಾಲಮನ್ನಾ ಆಗಲಿದೆ. ಇದಕ್ಕಾಗಿ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದರು.