ಕುಂದಾಪುರ, ಜ 09 (DaijiworldNews/HR): ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಗರ್ಭ ಧರಿಸಿದ ವ್ಯಕ್ತಿಯನ್ನು ಪೋಕ್ಸೋ ಅಡಿಯಲ್ಲಿ ಬಂಧಿಸಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಯಡಮೊಗೆ ಗ್ರಾಮದ ಮಧುವನ ನಿವಾಸಿ ಶ್ರೀಕಾಂತ (23) ಎಂದು ಗುರುತಿಸಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಆರೋಪಿ ನಿರಂತರವಾಗಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ರಾತ್ರಿ ವೇಳೆ ಆಕೆಯ ಮೇಲೆ ಅತ್ಯಾಚಾರ ಎಸಗುತ್ತಿದ್ದ ಎನ್ನಲಾಗಿದೆ.
ಇನ್ನು ಬಾಲಕಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ತಾಲೂಕಿನ ಸರಕಾರಿ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಸಿಕೊಂಡಿದ್ದು, ಆಗ ಆಸ್ಪತ್ರೆಯ ವೈದ್ಯರು ಆಕೆಯ ಗರ್ಭಿಣಿಯನ್ನು ಖಚಿತಪಡಿಸಿದ್ದಾರೆ.
ಈ ಬಗ್ಗೆ ಶಂಕರನಾರಾಯಣ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.