ಕಾಸರಗೋಡು, ಜ 09 (DaijiworldNews/HR): ಜಿಲ್ಲೆಯಲ್ಲಿ ಭಾನುವಾರ ನಾಲ್ಕು ಮಂದಿಗೆ ಒಮಿಕ್ರಾನ್ ಹಾಗೂ 147 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಕೊರೊನಾದಿಂದ 724 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 4, 941 ಮಂದಿ ನಿಗಾದಲ್ಲಿದ್ದು, 38 ಮಂದಿ ಗುಣಮುಖರಾಗಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,44,472 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,42,477 ಮಂದಿ ಗುಣಮುಖರಾಗಿದ್ದಾರೆ.