ಮಂಗಳೂರು, ಜ.10 (DaijiworldNews/PY): ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ಗೆ ಎರಡನೇ ಬಾರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ" ಮಾಡಿದ್ದಾರೆ.
ಈ ಹಿಂದೆ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು,ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರು ಸೋಂಕಿನಿಂದ ಗುಣಮುಖರಾಗಿದ್ದರು.