ಕಾಸರಗೋಡು, ಜ 10 (DaijiworldNews/MS): ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಕೊರೋನ ಸಲಹಾ ಸಮಿತಿ ಸಭೆಯಲ್ಲಿ ಮದುವೆ ಮತ್ತು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವವರ ಗರಿಷ್ಠ ಸಂಖ್ಯೆಯನ್ನು 50ಕ್ಕೆ ಸೀಮಿತಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್
ಇದರಂತೆ, ಜನಸಂದಣಿ ಸೇರುವುದನ್ನು ನಿಷೇಧಿಸಲಾಗಿದ್ದು ಎಲ್ಲಾ ರೀತಿಯ ಧಾರ್ಮಿಕ, ರಾಜಕೀಯ, ಸಾಂಸ್ಕೃತಿಕ ಮತ್ತು ಇತರ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಎಲ್ಲರೂ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಬೇಕು. ಬಹುತೇಕ ಕಾರ್ಯಕ್ರಮಗಳನ್ನು ಆನ್ಲೈನ್ನಲ್ಲಿ ನಡೆಸಬೇಕು. ಕೋವಿಡ್ ಮಾರ್ಗಸೂಚಿಗಳ ಅಡಿಯಲ್ಲಿ ಅತ್ಯಂತ ಅಗತ್ಯವಾದ ಕಾರ್ಯಕ್ರಮಗಳನ್ನು ಮಾತ್ರ ನಡೆಸಬೇಕಾಗುತ್ತದೆ. ಸಾರ್ವಜನಿಕ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ.
ಪ್ರಸ್ತುತ ವಾರಾಂತ್ಯದ ಕರ್ಫ್ಯೂ ಮತ್ತು ಹೆಚ್ಚುವರಿ ನಿರ್ಬಂಧಗಳನ್ನು ಜಾರಿಗೆ ತರದಿರಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಸದ್ಯಕ್ಕೆ ಶಾಲೆಗಳನ್ನು ಮುಚ್ಚದಿರಲು ತೀರ್ಮಾನಿಸಲಾಗಿದ್ದು, ತೀರ್ಮಾನ ತೆಗೆದುಕೊಳ್ಳಲಾಯಿತು.