ಬಂಟ್ವಾಳ, ಜ 11 (DaijiworldNews/HR): ರುಂಡ- ಮುಂಡ ಬೇರ್ಪಟ್ಟ ಮೃತದೇಹವೊಂದು ಬಿ.ಸಿ.ರೋಡು ರೈಲ್ವೇ ನಿಲ್ದಾಣದ ಪಕ್ಕದಲ್ಲಿ ಸೋಮವಾರ ರಾತ್ರಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಸಾಂದರ್ಭಿಕ ಚಿತ್ರ
ರಾತ್ರಿ ಸುಮಾರು 8 ಗಂಟೆಯ ವೇಳೆ ವ್ಯಕ್ತಿಯು ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಶಂಕಿಸಲಾಗಿದೆ.
ಇನ್ನು ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಮಂಗಳೂರು ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.