ಕಾರ್ಕಳ: ಜ, 12 (DaijiworldNews/AN): ರಾಜ್ಯದಲ್ಲಿ ಕೊರೋನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜನ ಸಾಮಾನ್ಯರ ಆರೋಗ್ಯ ಹಾಗೂ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಜನವರಿ 16 ರಿಂದ 27 ರವರೆಗೆ ನೆರವೇರಬೇಕಿದ್ದ ಅತ್ತೂರು ಕಾರ್ಕಳ ಸಂತ ಲಾರೆನ್ಸ್ ಪುಣ್ಯಕ್ಷೇತ್ರ ಬಸಿಲಿಕದ ವಾರ್ಷಿಕ ನವೇನ ಪ್ರಾರ್ಥನೆ ಹಾಗೂ ಮಹೋತ್ಸವವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿದೆ ಎಂದು ಬಸಿಲಿಕಾದ ನಿರ್ದೇಶಕರಾದ ಆಲ್ಬನ್ ಡಿʼಸೋಜಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮುಂದೂಡಲ್ಪಟ್ಟ ವಾರ್ಷಿಕ ಮಹೋತ್ಸವದ ದಿನಾಂಕವನ್ನು ಸೂಕ್ತ ಸಮಯದಲ್ಲಿ ಭಕ್ತಾದಿಗಳಿಗೆ ತಿಳಿಸಲಾಗುವುದು ಭಕ್ತಾದಿಗಳು ಮತ್ತು ಸಾರ್ವಜನಿಕರು ಸಹಕರಿಸಬೇಕಾಗಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.