ಕಾಸರಗೋಡು, ಜ 12 (DaijiworldNews/HR): ಜಿಲ್ಲೆಯಲ್ಲಿ ಬುಧವಾರ ಎರಡು ಒಮಿಕ್ರಾನ್ ಹಾಗೂ 262 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ 128 ಮಂದಿ ಗುಣಮುಖರಾಗಿದ್ದು, 1,003 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಜಿಲ್ಲೆಯಲ್ಲಿ 5,636 ಮಂದಿ ನಿಗಾದಲ್ಲಿದ್ದು, ಇದುವರೆಗೆ 1,44,969 ಮಂದಿಗೆ ಸೋಂಕು ದೃಢಪಟ್ಟಿದ್ದು, ಈ ಪೈಕಿ 1,42,694 ಮಂದಿ ಗುಣಮುಖರಾಗಿದ್ದಾರೆ.
ಇಂದು ಎರಡು ಒಮಿಕ್ರಾನ್ ಪ್ರಕರಣಗಳು ದಾಖಲಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ಏಳಕ್ಕೇರಿದೆ.