ಅಯೋಧ್ಯೆ,ಡಿ,06 (MSP): ಬಾಬರಿ ಮಸೀದಿ ಧ್ವಂಸ ದಿನವಾದ ಇಂದು ಅಯೋಧ್ಯೆ ಸೇರಿದಂತೆ ದೇಶದ್ಯಾಂತ್ಯ ಕಟ್ಟೆಚ್ಚರ ವಹಿಸಲಾಗಿದ್ದು, ಆಯಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಮಾಡಲಾಗಿದೆ.ಇನ್ನು ಈ ಉತ್ತರ ಪ್ರದೇಶದ ಅಯೋಧ್ಯಾ ನಗರದಲ್ಲಿ ಹಿಂದೂ ಪರ ಸಂಘಟನೆಗಳು ಅಂದು ನಡೆಸಿದ ಕೃತ್ಯ, ಕರಸೇವಕರ ಪಾಲಿಗೆ ಶೌರ್ಯ ದಿವಸವಾಗಿದ್ದರೆ, ಮುಸ್ಲಿಂ ಸಂಘಟನೆಗಳಿಗೆ ಕಪ್ಪು ದಿನವಾಗಿ ಆಚರಣೆ ಮಾಡುತ್ತಿದೆ.
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಎಲ್ಲ ಪಕ್ಷಗಳ ದೃಷ್ಟಿ ಅಯೋಧ್ಯೆ ಕಡೆಗೆ ಹರಿದಿದೆ. ಅಯೋಧ್ಯೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಆಯಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಮಾಡಲಾಗಿದೆ. ವಿವಾದಿತ ಜಾಗದ ಸಮೀಪ ಬುಧವಾರ ಸಂಶಯಾಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ ಹಿಂದೂ ಸಮಾಜ ಪಾರ್ಟಿಯ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣಕ್ಕೆ ಡಿ.6ಕ್ಕೆ 26 ವರ್ಷ ತುಂಬಿದೆ ಈ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಅಯೋಧ್ಯೆಯಲ್ಲಿ ಶೌರ್ಯ ದಿನ ಕಾರ್ಯಕ್ರಮ ಹಮ್ಮಿಕೊಂಡಿದೆ. ಮುಸ್ಲಿಂ ಸಂಘಟನೆಗಳು ಕರಾಳ ದಿನ ಆಚರಣೆಗೆ ನಿರ್ಧರಿಸಿವೆ.