ಮಂಗಳೂರು, ಜ 13 (DaijiworldNews/MS): ಕೊರೋನಾ ಪೀಡಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಚರಿಸುತ್ತಿರುವ ರಿಕ್ರಿಯೇಷನ್ ಕ್ಲಬ್ ಗಳನ್ನು ಮುಚ್ಚುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅದ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಕ್ಲಬ್ ಗಳಲ್ಲಿಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವುದರಿಂದ ಕೊರೊನಾ ವೈರಾಣು ಸುಲಭವಾಗಿ ಹರಡುವ ಸಾಧ್ಯತೆ ಇರುತ್ತದೆ.ಆದ್ದರಿಂದ ಮುಂದಿನ ಆದೇಶದ ವರೆಗೆ ಜಿಲ್ಲೆಯಲ್ಲಿರುವ ಎಲ್ಲಾ ರಿಕ್ರಿಯೇಷನ್ ಕ್ಲಬ್ ಗಳನ್ನು ಮುಚ್ಚುವಂತೆ ಆದೇಶಿಸಲಾಗುತ್ತದೆ.