ಮಂಗಳೂರು, ಜ 13 (DaijiworldNews/PY): ಯುವಕನೊಬ್ಬ ಮೊಬೈಲ್ ಕದ್ದು ಪರಾರಿಯಾಗಲು ಯತ್ನಿಸುತ್ತಿರುವುದನ್ನು ಕಂಡ ಪೊಲೀಸ್ ಆತನನ್ನು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ನೆಹರೂ ಮೈದಾನದಲ್ಲಿ ಮಲಗಿದ್ದ ವ್ಯಕ್ತಿಯೋರ್ವನ ಮೊಬೈಲ್ ಕದ್ದು ಪರಾರಿಯಾಗುತ್ತಿದ್ದನ್ನು ಕಂಡ ಸ್ಥಳೀಯರು ಹಾಗೂ ಮೊಬೈಲ್ ಕಳೆದುಕೊಂಡ ವ್ಯಕ್ತಿ ಬೆನ್ನಟ್ಟಿದ್ದಾರೆ. ಮೊಬೈಲ್ ಕದ್ದು ಪರಾರಿಯಾಗಲು ಯತ್ನಿಸಿದ ಕಳ್ಳನನ್ನು ಪೊಲೀಸ್ ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದು, ಮತ್ತೋರ್ವನನ್ನು ವಶಕ್ಕೆ ಪಡೆದಿದ್ದಾರೆ.
ಘಟನೆಯ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.