ಉಡುಪಿ, ಜ 14 (DaijiworldNews/PY): "ಜಿಲ್ಲೆಯಲ್ಲಿ ಈ ವಾರವೂ ವಾರಾಂತ್ಯ ಕರ್ಫ್ಯೂ ಇದೆ. ರದ್ದಾಗಿಲ್ಲ" ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, "ಉಡುಪಿಯಲ್ಲಿ ವೀಕೆಂಡ್ ಕರ್ಫ್ಯೂ ರದ್ದಾಗಿಲ್ಲ ಈ ವಾರವೂ (ಜ.15, 16) ವಾರಾಂತ್ಯ ಕರ್ಫ್ಯೂ ಇದೆ. ಉಡುಪಿಯಲ್ಲಿ ವಾರಾಂತ್ಯ ಕರ್ಫ್ಯೂ ಇಲ್ಲ ಎಂದು ಸುಳ್ಳು ಸುದ್ದಿಯನ್ನು ವೈರಲ್ ಮಾಡುತ್ತಿದ್ದಾರೆ" ಎಂದಿದ್ದಾರೆ.
"ಸಾಮಾಜಿಕ ಜಾಲತಾಣದಲ್ಲಿ ಈ ಹಿಂದಿನ ಸುದ್ದಿಯನ್ನು ವೈರಲ್ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದಾಗಿರುವುದು ಸುಳ್ಳು ಸುದ್ದಿ" ಎಂದು ಹೇಳಿದ್ದಾರೆ.
"ಜಿಲ್ಲೆಯಲ್ಲಿ ನೈರ್ಟ್ ಕರ್ಫ್ಯೂ ಹಾಗೂ ವಾರಾಂತ್ಯ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ ಮಾಡಲಾಗಿದೆ" ಎಂದಿದ್ದಾರೆ.