ಪುತ್ತೂರು, ಜ 14 (DaijiworldNews/HR): ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ಪಾಪಿ ಮಗನೇ ತಾಯಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಜ.12ರ ತಡರಾತ್ರಿ ನಡೆದಿದ್ದು, ಈ ಬಗ್ಗೆ ಸಂತ್ರಸ್ತ ತಾಯಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸಾಂದರ್ಭಿಕ ಚಿತ್ರ
ತಾಯಿ ಮತ್ತು ಮಗ ಒಂದೇ ಮನೆಯಲ್ಲಿ ವಾಸಿಸುತ್ತಿದ್ದು, ಜ.12ರಂದು ಎಂದಿನಂತೆ ರಾತ್ರಿ ಊಟ ಮಾಡಿ ಆರೋಪಿಯು ತನ್ನ ಕೋಣೆಯಲ್ಲಿ ಮಲಗಿದ್ದು, 3 ಗಂಟೆ ನಸುಕಿನ ವೇಳೆ ತಾಯಿ ಮಲಗಿದ್ದ ರೂಮ್ ಗೆ ಬಂದಿದ್ದ ಆರೋಪಿ ಅತ್ಯಾಚಾರ ಎಸಗಿದ್ದಾನೆ. ಈ ವಿಚಾರವನ್ನು ಯಾರಲ್ಲಾದರೂ ತಿಳಿಸಿದರೆ ಕೊಂದು ಬಿಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.
ಇದಾದ ಬಳಿಕ ಜ.13ರಂದು ಬೆಳಗ್ಗೆ ತಾಯಿ ಅಡುಗೆ ಕೋಣೆಯಲ್ಲಿದ್ದ ಸಂದರ್ಭದಲ್ಲಿ ಕೂಡ ಅಲ್ಲಿಗೂ ಬಂದ ಆರೋಪಿ ಬಲವಂತದಿಂದ ಅವರನ್ನು ಮನೆಯ ಹಾಲ್ಗೆ ಎಳೆದೊಯ್ದು ಅತ್ಯಾಚಾರ ಎಸಗಿರುವುದಾಗಿ ತಿಳಿಸಿದ್ದಾರೆ.
ಇನ್ನು ಮಗನ ಈ ದುಷ್ಕೃತ್ಯದಿಂದ ತಾಯಿಯೂ ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆತನ ವಿರುದ್ಧ ಐಪಿಸಿ ಸೆಕ್ಷನ್ 376(2)(N)506ರಂತೆ ಪ್ರಕರಣ ದಾಖಲಾಗಿದೆ.