ಮಂಗಳೂರು, ಡಿ 06 (MSP): ಮಂಗಳೂರಿನ ಹಳೆ ಬಂದರು ರಸ್ತೆಯಲ್ಲಿ ಲಾರಿ ಚಾಲಕನೋರ್ವನ ಮೃತದೇಹ ಪತ್ತೆಯಾಗಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯನ್ನು ತಮಿಳ್ನಾಡು ಮೂಲದ ಮಹಮ್ಮದ್ ಎಂದು ಗುರುತಿಸಲಾಗಿದೆ.
ಇವರು ಕಳೆದ ಹಲವಾರು ವರ್ಷಗಳಿಂದ ಮಂಗಳೂರಿನ ಬಂದರಿನಲ್ಲಿ ಮೀನಿನ ಲಾರಿಯಲ್ಲಿ ಚಾಲಕರಾಗಿ ದುಡಿಯುತ್ತಿದ್ದರು. ಕೊಲೆ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿಚಾರಣೆ ಮುಂದುವರೆಸಿದ್ದಾರೆ. ಇನ್ನು ತನಿಖೆಯ ಬಳಿಕವಷ್ಟೇ ಸತ್ಯಾಂಶ ಬಯಲಿಗೆ ಬರಬೇಕಾಗಿದೆ.