ಕಾರ್ಕಳ, ಜ 14 (DaijiworldNews/HR): ದೇಶದಾದ್ಯಂತ ಕೊರೊನಾ ಪ್ರಕರಣಗಳು ದಿನದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ರಾಜ್ಯ ಇಂಧನ ಮತ್ತು ಕನ್ನಡ ಸಂಸ್ಕೃತಿ ಖಾತೆ ಸಚಿವ ಸುನಿಲ್ ಕುಮಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು, "ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ತನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ" ಎಂದು ಮನವಿ ಮಾಡಿದ್ದಾರೆ.
ಇನ್ನು ಸಚಿವ ಸುನಿಲ್ ಕುಮಾರ್ ಅವರಿಗೆ ಎರಡನೇ ಬಾರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.