ಬಂಟ್ವಾಳ, ಜ 14 (DaijiworldNews/HR): ಸಾಲೆತ್ತೂರಿನಲ್ಲಿ ಮದುಮಗನೊಬ್ಬ ಕೊರಗಜ್ಜನ ವೇಷ ಧರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವರನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ಯುವಕನೊಬ್ಬನ ವಿರುದ್ಧ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರಿನ ಖಾಸಗಿ ಬ್ಯಾಂಕ್ನ ಉದ್ಯೋಗಿ ವಿಷ್ಣು ಪ್ರಸಾದ್ ನಿಡ್ಡಾಜೆ ಅವರು ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಪ್ರಚೋದನಕಾರಿ ಕಾಮೆಂಟ್ ಬರೆದಿದ್ದಾರೆ ಎಂಬ ಆರೋಪವಿದೆ.
ಈ ಹಿನ್ನೆಲೆಯಲ್ಲಿ ಪಿಎಫ್ಐ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ವಿಷ್ಣು ಪ್ರಸಾದ್ ವಿರುದ್ದ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.