ಮಂಗಳೂರು, ಜ 15 (DaijiworldNews/HR): ರಾಜ್ಯದ್ಯಾಂತ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಘೋಷಿಸಿದ ವಿಕೇಂಡ್ ಲಾಕ್ಡೌನ್ಗೆ ಜನವರಿ 15 ರ ಶನಿವಾರ ನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ರಾಜ್ಯದಲ್ಲಿ ವಾರಾಂತ್ಯದ ಕರ್ಫ್ಯೂ ಇರುವುದರಿಂದ ಜನರು ಅಗತ್ಯ ವಸ್ತುಗಳನ್ನು ಖರೀದಿಸಿಸುವುದಕ್ಕೆ ಅಷ್ಟೆ ಮನೆಯಿಂದ ಹೊರ ಬಂದಿದ್ದಾರೆ ಎನ್ನಲಾಗಿದೆ.
ಇನ್ನು ತರಕಾರಿ, ಮಾಂಸ ಮತ್ತು ಮೀನು ಮಾರಾಟ ಸೇರಿದಂತೆ ಅಗತ್ಯ ಸೇವೆಗಳ ಅಂಗಡಿಗಳು ತೆರೆದಿದ್ದರೂ, ವಾರಾಂತ್ಯದ ಕರ್ಫ್ಯೂ ಭಾಗವಾಗಿ ಶುಕ್ರವಾರ ರಾತ್ರಿ 10 ರಿಂದ ಸೋಮವಾರ ಬೆಳಿಗ್ಗೆ 5 ರವರೆಗೆ ಜನರ ಸಂಚಾರವನ್ನು ನಿರ್ಬಂಧಿಸಿದ್ದರಿಂದ ಹೆಚ್ಚಿನ ಅಂಗಡಿಗಳು ಮುಚ್ಚಲ್ಪಟ್ಟಿತ್ತು.