ಕಾಸರಗೋಡು, ಜ 16 (DaijiworldNews/MS): ಬೈಕ್ ಮತ್ತು ಟ್ಯಾಂಕರ್ ನಡುವೆ ಉಂಟಾದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಜ.16 ರ ಭಾನುವಾರ ಬೆಳಿಗ್ಗೆ ನಗರದ ಹೊಸ ಬಸ್ಸು ನಿಲ್ದಾಣ ಪರಿಸರದಲ್ಲಿ ನಡೆದಿದೆ. ನುಳ್ಳಿ ಪ್ಪಾಡಿ ಯ ಅಬ್ದುಲ್ ಮಜೀದ್ (42) ಮೃತ್ಪಟ್ಟವರು.
ನಗರದ ಹೊಸ ಬಸ್ಸು ನಿಲ್ದಾಣ ಪರಿಸರದ ಸರ್ಕಲ್ ಬಳಿ ಈ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಮಜೀದ್’ರನ್ನು ಸಮೀಪದ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ. ಕಾಸರಗೋಡು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಟ್ಯಾಂಕರ್ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಲ್ಲಿರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.