ಕಾಸರಗೋಡು, ಜ 16 (DaijiworldNews/HR): ಜಿಲ್ಲೆಯಲ್ಲಿ ಭಾನುವಾರ 299 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 103 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 1,862 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 6,979 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಇದುವರೆಗೆ 1,46,142 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,42,973 ಮಂದಿ ಗುಣಮುಖರಾಗಿದ್ದಾರೆ.