ಬೆಳ್ತಂಗಡಿ, ಜ.18 (DaijiworldNews/KP) : ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಕಿನ್ನಿಗೋಳಿಯ ಮದ್ದಡ್ಕದಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.
ಮೃತಪಟ್ಟ ಯುವಕರನ್ನು ನಾವೂರಿನ ಹಮೀದ್ ಕುದೂರು ಎಂಬವರ ಪುತ್ರ ನಿಶ್ಬಾಹ್ (19) ಹಾಗೂ ಗುರುವಾಯನಕೆರೆಯ ಕುವೆಟ್ಟು ನಿವಾಸಿ ಅಶ್ರಫ್ ಅವರ ಪುತ್ರ ಅಶ್ಪಾನ್ (19) ಎಂದು ಗುರುತಿಸಲಾಗಿದೆ.
ಮೃತರಿಬ್ಬರೂ ಮದ್ದಡ್ಕ ಮಸೀದಿ ಎದುರು ಇರುವ ಮಟನ್ ಸ್ಟಾಲ್ನಲ್ಲಿ ಕೆಲಸ ಮಾಡುತ್ತಿದ್ದು, ಎಂದಿನಂತೆ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಎದುರಿನಂದ ಬಂದ ಟಿಪ್ಪರ್ ಬೈಕಿಗೆ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಯುವಕರು ಮೃತಪಟ್ಟಿದ್ದು, ಟಿಪ್ಪರ್ ಸವಾರ ಪ್ರಾಣಾಪಾಯದಿಂದ ಪರಾಗಿದ್ದಾರೆ.