ಕಾರ್ಕಳ: ಜ 19 (DaijiworldNews/HR): ಕಳೆದ 20 ವರ್ಷದಿಂದ ತಲೆಮರೆಸಿಕೊಂಡಿದ್ದಆರೋಪಿಯೊಬ್ಬನನ್ನು ಬಂದರು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಾರ್ಕಳದ ಬಜಗೋಳಿಯ ದಿಡಿಂಬಿಲ ಗುಡ್ಡದ ಝಕರಿಯಾ ಎಂದು ಗುರುತಿಸಲಾಗಿದೆ.
ಈತನ ವಿರುದ್ಧ 2000ರಲ್ಲಿ ಬಂದರು ಪೊಲೀಸರು ಪ್ರಕರಣ ದಾಖಲಿಸಿದ್ದರು. ಆ ಬಳಿಕ ಪೊಲೀಸರಿಗೆ ಸಿಗದೆ ಆರೋಪಿ ತಲೆಮರೆಸಿಕೊಂಡಿದ್ದ.
ಇನ್ನು ಆರೋಪಿಯ ಇರುವಿಕೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.