ಬ್ರಹ್ಮಾವರ,ಜ 19 (DaijiworldNews/KP): ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಾಗೊಂಡಿದ್ದ ಸರಿತಾ ಪಿಂಟೊ (38) ಚಿಕಿತ್ಸೆ ಫಲಕಾರಿಯಾಗದೆ ಇಂದು ಅಸುನೀಗಿದ್ದಾರೆ.
ಇವರು ಸೋಮವಾರ ಕೋಟದಲ್ಲಿರುವ ತನ್ನ ತಂದೆ-ತಾಯಿ ಮನೆಗೆ ಕಳೆದ ಕೆಲವು ದಿನಗಳ ಹಿಂದೆ ಕುವೈಟ್ ನಿಂದ ಆಗಮಿಸಿದ ಪತಿ ಅನಿಲ್ ಪಿಂಟೊ ಮತ್ತು 3 ವರ್ಷದ ಮಗುವಿನೊಂದಿಗೆ ದ್ವಿಚಕ್ರದಲ್ಲಿ ತೆರಳುತ್ತಿದ್ದ ವೇಳೆ ಬ್ರಹ್ಮಾವರದ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಅವರು ಇಂದು ಬಲಿಯಾಗಿದ್ದಾರೆ.
ಮಗ ಮತ್ತು ಪತಿ ಸಣ್ಣ ಪುಟ್ಟ ಗಾಯಾಗಳೊಂದಿಗೆ ಪಾರಾಗಿದ್ದಾರೆ, ತಲೆಗೆ ತೀವ್ರವಾಗಿ ಗಾಯಾಗೊಂಡಿದ್ದ ಸರಿತಾರನ್ನು ಮಣಿಪಾಲದ ಕೆಎಂಸಿ ಅಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ 2 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿ ನಿಧನರಾಗಿದ್ದಾರೆ.
ಮೃತರು ಸಹೋದರ, ತಾಯಿ, ಪತಿ,ಪುತ್ರ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.