ಮಂಗಳೂರು, ಜ. 20 (DaijiworldNews/SM): ಕಾರು ಚಾಲಕನೋರ್ವ ಆಂಬ್ಯುಲೆನ್ಸ್ಗೆ ದಾರಿ ಬಿಟ್ಟು ಕೊಡದ ಘಟನೆಯೊಂದು ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿ ಕಾರು ಚಾಲಕನನ್ನು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಮಂಗಳೂರಿನ ಅತ್ತಾವರ ನಿವಾಸಿ ಮೋನಿಶ್ ಬಂಧಿತನಾಗಿದ್ದಾನೆ. ಆಂಬ್ಯುಲೆನ್ಸ್ಗೆ ದಾರಿ ಬಿಟ್ಟು ಕೊಡದ ಹಿನ್ನಲೆ ಕಾರು ಚಾಲಕನ ವಿರುದ್ಧ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿಕೊಂಡಿದ್ದರು.
ಬಳಿಕ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಮಂಗಳೂರು ಉತ್ತರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವೀಡಿಯೋ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.