ಕಾರ್ಕಳ, ಜ 21 (DaijiworldNews/HR): ಹಿರ್ಗಾನ ಗ್ರಾಮದ ಹೊಸ್ಮಾರು ಎಂಬಲ್ಲಿ ಅನಾರೋಗ್ಯ ಪೀಡಿತ ಮಹಿಳೆಯೊಬ್ಬರು ಕೊರೊನಾ ಸೋಂಕಿನ ಭಯದಿಂದ ಮೈಮೇಲೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಹೊಸ್ಮಾರು ನಿವಾಸಿ ಲಕ್ಷ್ಮೀ(65) ಎಂದು ಗುರುತಿಸಲಾಗಿದೆ.
ಲಕ್ಷ್ಮೀ ಅವರು ಅನಾರೋಗ್ಯದಿಂದ ಬಳಲುತ್ತಿದ್ದ, ಕೊರೊನಾ ಸೋಂಕು ದೃಢಪಡದಿದ್ದರು ಸೋಂಕು ತಗುಲುವ ಭೀತಿಯಲ್ಲಿ ಪತ್ರ ಬರೆದಿಟ್ಟು, ಮನೆಯ ಹಿಂಬದಿಯಲ್ಲಿ ಮೈಮೇಲೆ ಡಿಸೇಲ್ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821