ಮಂಗಳೂರು, ಜ. 21 (DaijiworldNews/SM): ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಯೆಯ್ಯಾಡಿ ಜಂಕ್ಷನ್ ಬಳಿ ನಡೆದಿದೆ.
ಡ್ಯಾನಿ ಪೌಲ್(38) ಹಾಗೂ ಮ್ಯಾಕ್ಸಿಮಾ ನೊರೊನ್ಹಾ(54) ಎಂಬವರುವ ಹಲ್ಲೆ ನಡೆಸಿದ್ದು, ಅವರನ್ನು ಬಂಧಿಸಲಾಗಿದೆ. ಪೊಲೀಸ್ ಸಿಬ್ಬಂದಿಗಳಿಬ್ಬರು ಜನವರಿ 18 ರಂದು ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಇಬ್ಬರು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲಾಗಿದೆ.
ಪೊಲೀಸರ ದ್ವಿಚಕ್ರ ವಾಹನದ ಕೀ ಕಿತ್ತೆಸೆದು, ಅವಾಚ್ಯವಾಗಿ ನಿಂದನೆ ಮಾಡಿ, ಬೆದರಿಕೆಯೊಡ್ಡಿ, ಪೊಲೀಸರಿಗೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.