ಸುಳ್ಯ, ಡಿ 07(SM): ನಗರ ಪ್ರದೇಶದಲ್ಲಿ ವಸತಿ ನಿರ್ಮಾಣಕ್ಕೆ ಸರಕಾರಿ ಜಾಗದ ಕೊರತೆ ಇದ್ದಲ್ಲಿ ಖಾಸಗಿ ಜಾಗ ಖರೀದಿಸಲು ಸರಕಾರ ಆರ್ಥಿಕ ನೆರವು ನೀಡುತ್ತದೆ ಎಂದು ನಗರಾಭಿವೃದ್ದಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.
ಅವರು ಸುಳ್ಯ ನಗರ ಪಂಚಾಯತ್ನಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ ನಗರದಲ್ಲಿ 1000ಕ್ಕೂ ಮಿಕ್ಕಿ ಅರ್ಜಿದಾರರಿಗೆ ಮನೆ ನಿರ್ಮಾಣಕ್ಕೆ ಜಾಗದ ಕೊರತೆ ಇರುವ ಕುರಿತು ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಅವರು ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಂಡು ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಪ್ರಸ್ತಾವಣೆ ಸಲ್ಲಿಸಿದರೆ ಹಣ ಬಿಡುಗಡೆ ಮಾಡಲಾಗುತ್ತದೆ ಎಂದರು.
ನಗರದಲ್ಲಿ 66.5 ಕೋಟಿ ರೂಪಾಯಿ ಶಾಶ್ವತ ಕುಡಿಯುವ ನೀರು ಪ್ರಸ್ತಾವನೆ ಸಚಿವ ಸಂಪುಟದ ಮುಂದಿರುವ ಬಗ್ಗೆ ಮಾಹಿತಿ ಪಡೆದ ಸಚಿವರು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.